ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಮಗುವಿಗೆ ಜನ್ಮ ನೀಡಿದ 14ರ ಬಾಲಕಿ - ಮಗುವಿಗೆ ಜನ್ಮ ನೀಡಿದ ಬಾಲಕಿ

ಶಾಲೆಯಲ್ಲಿ ವಿದ್ಯಾರ್ಜನೆ ಮಾಡಬೇಕಿದ್ದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

girl gave birth  birth to a boy  Chikkaballapur  ಮಗುವಿಗೆ ಜನ್ಮ ನೀಡಿದ ಬಾಲಕಿ  ಶಾಲಾ ಬಾಲಕಿ ಗರ್ಭಿಣಿ  q
ಗಂಡು ಮಗುವಿಗೆ ಜನ್ಮ ನೀಡಿದ 14ರ ಬಾಲಕಿ

By ETV Bharat Karnataka Team

Published : Jan 11, 2024, 12:46 PM IST

Updated : Jan 11, 2024, 4:58 PM IST

ಚಿಕ್ಕಬಳ್ಳಾಪುರ:ಪಾಠ ಕೇಳುವ ವಯಸ್ಸಿನಲ್ಲಿ ಬಾಲಕಿಯೊಬ್ಬಳು ತಾಯಿಯಾಗಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾಗುವರೆಗೂ ಪೋಷಕರು, ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ, ಶಾಲಾ ಶಿಕ್ಷಕರು ಬಾಲಕಿಯ ದೇಹದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಲಿಲ್ಲವೇ ಎಂಬೆಲ್ಲಾ ಪ್ರಶ್ನೆಗಳು ಕಾಡತೊಡಗಿವೆ.

ಘಟನೆಯ ವಿವರ: ಬಾಗೇಪಲ್ಲಿ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಬಾಲಕಿ ತುಮಕೂರು ಜಿಲ್ಲೆಯ ಮಧುಗಿರಿಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿದ್ದು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕೆಲವು ದಿನಗಳ ಹಿಂದಷ್ಟೇ ಹೊಟ್ಟೆನೋವು ಎಂದು ತನ್ನ ತಾಯಿಯೊಂದಿಗೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚುಚ್ಚುಮದ್ದು ಹಾಕಿಸಿಕೊಂಡು ತೆರಳಿದ್ದಳು. ಆದರೆ, ಕೆಲ ಸಮಯದ ನಂತರ ಮತ್ತೆ ಹೊಟ್ಟೆನೋವು ಎಂದು ಹೇಳಿ ಆಸ್ಪತ್ರೆಗೆ ಬಂದಿದ್ದಾಳೆ. ಆಗ ಬಾಲಕಿಗೆ ಮತ್ತೆ ಚಿಕಿತ್ಸೆ ನೀಡಲಾಗಿದೆ. ಇದಾದ ಬಳಿಕ ಹೆರಿಗೆ ನೋವು ಕಂಡುಬಂದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಗುವಿನ ತೂಕ 2.2 ಕೆ.ಜಿ ಇದೆ. ಬಾಲಕಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಹೆಚ್ಚಿನ ಆರೈಕೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಓರ್ವ ಪುರುಷ, ಮಹಿಳೆಯ ಶವ ಪತ್ತೆ

Last Updated : Jan 11, 2024, 4:58 PM IST

ABOUT THE AUTHOR

...view details