ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 164 ಕೊರೊನಾ ಸೋಂಕಿತರು ಗುಣಮುಖ: 40 ಹೊಸ ಪ್ರಕರಣ ಪತ್ತೆ - Chikkaballapur coronavirus news

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ‌ ಇಂದು ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಒಟ್ಟು 815 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, 633 ಜನ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 164 ಕೊರೊನಾ ಸೋಂಕಿತರು ಗುಣಮುಖ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 164 ಕೊರೊನಾ ಸೋಂಕಿತರು ಗುಣಮುಖ

By

Published : Jul 27, 2020, 7:32 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 164 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಇಂದು ಬಿಡುಗಡೆಗೊಂಡಿದ್ದರೆ, ಒಂದು ವರ್ಷದ ಮಗು ಸೇರಿದಂತೆ 40 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿ‌ ಇಂದು ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಈ ಕುರಿತು ಜಿಲ್ಲಾಡಳಿತ ಸಂತಸ ವ್ಯಕ್ತಪಡಿಸಿದೆ. ಇಂದು 40 ಹೊಸ ಸೋಂಕಿತರು ದೃಢಪಟ್ಟಿದ್ದು, ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 21, ಬಾಗೇಪಲ್ಲಿ 2, ಚಿಂತಾಮಣಿ 8, ಗೌರಿಬಿದನೂರು 6 ಹಾಗೂ ಗುಡಿಬಂಡೆ ವ್ಯಾಪ್ತಿಯಲ್ಲಿ 3 ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,479 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, 815 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. 633 ಜನ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details