ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಇಂದು 171 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 144, ಚಿಂತಾಮಣಿ 12, ಗೌರಿಬಿದನೂರು 4, ಬಾಗೇಪಲ್ಲಿ 7, ಶಿಡ್ಲಘಟ್ಟ 4 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಜಿಲ್ಲೆಯಾದ್ಯಂತ ಇಂದು 171 ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತ ಸೋಂಕಿತರ ಸಂಖ್ಯೆ 41 ಕ್ಕೆ ಏರಿಕೆಯಾಗಿದೆ.