ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಜೊತೆಗೆ ಹೊಸದಾಗಿ 71 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕ್ಕಬಳ್ಳಾಪುರದಲ್ಲಿ ಕೊರೊನಾಗೆ ಇಬ್ಬರು ಬಲಿ: 71 ಮಂದಿಗೆ ತಗುಲಿದ ಸೋಂಕು - Chickballapura latest news
ದೇಶದೆಲ್ಲೆಡೆ ತಲ್ಲಣ ಮೂಡಿಸಿರುವ ಕೊರೊನಾ ಸೋಂಕು ಇಂದು ಜಿಲ್ಲೆಯ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಜೊತೆಗೆ 71 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಚಿಕ್ಕಬಳ್ಳಾಪುರದಲ್ಲಿ 42, ಚಿಂತಾಮಣಿ 6, ಬಾಗೇಪಲ್ಲಿ 5, ಗೌರಿಬಿದನೂರಿ 15, ಗುಡಿಬಂಡೆ 1 ಮತ್ತು ಶಿಡ್ಲಘಟ್ಟದಲ್ಲಿ 2 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,849ಕ್ಕೆ ಏರಿಕೆಯಾಗಿದೆ.
ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತರ ಸಂಖ್ಯೆ 37ಕ್ಕೆ ತಲುಪಿದೆ. ಇದರಲ್ಲಿ ಒಬ್ಬರು ಅನ್ಯ ಕಾರಣದಿಂದ ಮೃತಪಟ್ಟಿರುತ್ತಾರೆ. 67 ಮಂದಿ ಇಂದು ಕೊರೊನಾ ಗೆದ್ದು ಬಂದಿದ್ದಾರೆ. ಈವರೆಗೆ 1,226 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 586 ಸೋಂಕಿತರಿಗೆ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.