ಚಿಕ್ಕಬಳ್ಳಾಪುರ :ಕೃಷಿ ಇಲಾಖೆಯ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 234ರ ಪಿಂಡಿಪಾಪನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೃಷಿ ಅಧಿಕಾರಿ ವಿನಯ್ ಕುಮಾರ್ ಮತ್ತು ತಾಂತ್ರಿಕ ವ್ಯವಸ್ಥಾಪಕ ಲೋಕೇಶ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಂಬಾಜಿ ದುರ್ಗಾ ಹೋಬಳಿ ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ಅಧಿಕಾರಿಗಳು ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದಾಗ ನಡೆದಿದೆ. ಡಿಕ್ಕಿ ಹೊಡೆದು ಅಪರಿಚಿತ ವಾಹನ ನಿಲ್ಲಿಸದೇ ಹೋಗಿದೆ.