ಬಾಗೇಪಲ್ಲಿ/ಚಿಕ್ಕಬಳ್ಳಾಪುರ:ಬೋರ್ವೆಲ್ ಲಾರಿ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.
ಬೋರ್ವೆಲ್ ಲಾರಿ ಪಲ್ಟಿ: ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ - 3 deaths in accident
ಬೋರ್ವೆಲ್ ಲಾರಿ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ. ಅಪಘಾತಕ್ಕೊಳಗಾದ ವಾಹನ ತಮಿಳುನಾಡು ಮೂಲದ್ದು ಎಂದು ತಿಳಿದು ಬಂದಿದೆ.
ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು
ಕುಡಿದು ಲಾರಿ ಚಾಲನೆ ಮಾಡುತ್ತಿದ್ದ ಚಾಲಕನ ಅಜಾಗರೂಕತೆಯಿಂದ ಮಧ್ಯರಾತ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ತಮಿಳುನಾಡಿಗೆ ಸೇರಿದ ಬೋರ್ವೆಲ್ ಲಾರಿ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಚೇಳೂರು ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.