ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 77 ಸೋಂಕಿತರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಮತ್ತೆ 30 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2,587ಕ್ಕೆ ಏರಿಕೆಯಾಗಿದೆ.
ಇಂದು ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 4, ಚಿಂತಾಮಣಿ 4, ಗೌರಿಬಿದನೂರು 1, ಬಾಗೇಪಲ್ಲಿ 11, ಶಿಡ್ಲಘಟ್ಟ 2 ಹಾಗೂ ಗುಡಿಬಂಡೆಯಲ್ಲಿ 5 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.