ಚಿಂತಾಮಣಿ: ಕಳೆದ ಬುಧವಾರ ಕುಟುಂಬವೊಂದು ಮನೆಯಲ್ಲಿ ಮಲಗಿದ್ದ ವೇಳೆ ಸಿಡಿಲು ಬಡಿದು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇವರಲ್ಲಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಭಾನುವಾರದಿಂದ ನಿನ್ನೆಯವರೆಗೆ ಸರಣಿಯಾಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಮುರುಗಮಲ್ಲ ಹೋಬಳಿ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಏಪ್ರಿಲ್ 21ರ ಬುಧವಾರ ಅಕಾಲಿಕ ಮಳೆಯಾಗಿತ್ತು. ಈ ವೇಳೆ ಕಲ್ಲು ಚಪ್ಪಡಿ ಮನೆಗೆ ಸಿಡಿಲು ಬಡಿದಿದೆ. ಪರಿಣಾಮ ಮನೆ ಕುಸಿದು ಬಿದ್ದಿದೆ. ಈ ವೇಳೆ ಮನೆಯಲ್ಲಿದ್ದ ಅಂಬರೀಷ್, ಪತ್ನಿ ಗಾಯತ್ರಮ್ಮ, ಮಕ್ಕಳಾದ ವಾಣಿಶ್ರೀ, ಲಾವಣ್ಯ, ದರ್ಶನ್, ಗೌತಮ್ ಜೊತೆಗೆ ಅಂಬರೀಷ್ ಅವರ ತಂದೆ ಜಗನ್ ಎಂಬುವವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿತ್ತು. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.