ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಇಂದು 24 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು 72 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 72 ಸೋಂಕಿತರ ಗುಣಮುಖ; ಒಂದು ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 60 ವರ್ಷದ ವೃದ್ಧನೊಬ್ಬ ಕೊರೊನಾದಿಂದ ಮೃತಪಟ್ಟಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೆ 49 ಜನ ಅಸುನೀಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 72 ಸೋಂಕಿತರ ಗುಣಮುಖ
ಚಿಕ್ಕಬಳ್ಳಾಪುರದಲ್ಲಿ 6, ಚಿಂತಾಮಣಿಯಲ್ಲಿ 10, ಗೌರಿಬಿದನೂರಿನಲ್ಲಿ 3 ಮತ್ತು ಶಿಡ್ಲಘಟ್ಟದಲ್ಲಿ 5 ಜನರಿಗೆ ಕೊರೊನಾ ಪಾಸಿಟಿವ್ ಧೃಢಪಟ್ಟಿದೆ. ಇನ್ನು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2722 ಕ್ಕೆ ಏರಿಕೆಯಾಗಿದ್ದು ಒಟ್ಟು 805 ಸಕ್ರಿಯ ಪ್ರಕರಣಗಳಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ಸೇರಿದಂತೆ ಹೋಂ ಐಸೋಲೇಷನ್ ಹಾಗೂ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಚಿಂತಾಮಣಿಯ 60 ವರ್ಷದ ವೃದ್ಧನೊಬ್ಬ ಕೊರೊನಾದಿಂದ ಮೃತಪಟ್ಟಿದ್ದು ಈ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.