ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 82 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,729ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 82 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 1,729ಕ್ಕೆ ಏರಿಕೆ - Chickballapura latest news
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿದ್ದು, ಇಂದು 82 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Chickballapura corona case
ಒಟ್ಟು ದಾಖಲಾದ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ 50, ಬಾಗೇಪಲ್ಲಿ 2, ಚಿಂತಾಮಣಿ 10, ಗೌರಿಬಿದನೂರು 6 ಹಾಗೂ ಶಿಡ್ಲಘಟ್ಟದಲ್ಲಿ 14 ಪ್ರಕರಣಗಳು ಕಾಣಿಸಿಕೊಂಡಿದೆ. ಇದರ ಜೊತೆಗೆ 46 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು 1,729 ಸೋಂಕಿತರ ಪೈಕಿ 35 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 609 ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆ ಸೇರಿದಂತೆ ಆಯಾ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.