ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 92 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 130 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು 92 ಸೋಂಕಿತರು ಪತ್ತೆ: 130 ಮಂದಿ ಗುಣಮುಖ - ಚಿಕ್ಕಬಳ್ಳಾಪುರ ಕೊರೊನಾ ಪ್ರಕರಣಗಳು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 92 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,647ಕ್ಕೆ ಏರಿಕೆಯಾಗಿದೆ.
![ಚಿಕ್ಕಬಳ್ಳಾಪುರದಲ್ಲಿ ಇಂದು 92 ಸೋಂಕಿತರು ಪತ್ತೆ: 130 ಮಂದಿ ಗುಣಮುಖ Chikkaballapur](https://etvbharatimages.akamaized.net/etvbharat/prod-images/768-512-02:50:27:1596100827-kn-ckb-01-29-corona-av-7202617-30072020143605-3007f-01256-330.jpg)
Chikkaballapur
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 38, ಚಿಂತಾಮಣಿ 21, ಗೌರಿಬಿದನೂರು 19, ಬಾಗೇಪಲ್ಲಿ 7, ಶಿಡ್ಲಘಟ್ಟ 3 ಹಾಗೂ ಗುಡಿಬಂಡೆಯಲ್ಲಿ 4 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಜಿಲ್ಲೆಯಾದ್ಯಂತ ಇಂದು 92 ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು ಸಹ ಕೊರೊನಾ ಸೋಂಕಿತರೊಬ್ಬರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಒಟ್ಟು 1,647 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1,040 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 573 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.