ಚಿಕ್ಕಬಳ್ಳಾಪುರ: ತಾಲೂಕಿನ ಚಿಕ್ಕನರನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕನರನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀನಾಥ್ ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.
a-body-found-as-corpse-detection-in-hanging
ಮೃತನನ್ನು ತಾಲೂಕಿನ ಮಂಡಿಕಲ್ ಹೋಬಳಿಯ ಚಿಕ್ಕನರನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮಗನಾದ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ಯುವಕ ಸುಮಾರು 10 ಗಂಟೆಗೆ ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಗುಡಿಬಂಡೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.