ಚಿಕ್ಕಬಳ್ಳಾಪುರ :ಚಾಲಕನ ನಿಯಂತ್ರಣ ತಪ್ಪಿ ಬುಲೆರೋ ವಾಹನ ಕಂದಕಕ್ಕೆ ಉರುಳಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದ ಇಂದಿರಾ ಕ್ಯಾಂಟೀನ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬುಲೆರೋ ವಾಹನ - driver's control
ಚಾಲಕನ ನಿಯಂತ್ರಣ ತಪ್ಪಿ ಬುಲೆರೋ ವಾಹನ ಕಂದಕಕ್ಕೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಬುಲೆರೋ ವಾಹನ
ಟೋಮೆಟೊ ಲೋಡ್ ಮಾಡಿಕೊಂಡು ಬುಲೆರೋ ವಾಹನ ಚಿಕ್ಕಬಳ್ಳಾಪುರದಿಂದ ಚಿಂತಾಮಣಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಂಯತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಮುಖ್ಯ ರಸ್ತೆಯಲ್ಲಿ ಸುರಕ್ಷಿತ ತಡೆಗೋಡೆ ಇಲ್ಲದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮುಖ್ಯ ರಸ್ತೆಯಲ್ಲಿ ತಡೆಗೋಡೆ ಇಲ್ಲದೇ ಅಪಾಯದ ಅಂಚಿನಲ್ಲಿರುವ ಬಗ್ಗೆ 'ಈಟಿವಿ ಭಾರತ್' ವರದಿ ಮಾಡಿತ್ತು. ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.