ಚಿಕ್ಕಬಳ್ಳಾಪುರ: ತಂದೆ ತಾಯಿಯನ್ನು ಕಳೆದುಕೊಂಡು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಯುವತಿಯನ್ನು ಎಲ್.ಎಲ್.ಬಿ ಪದವೀಧರ ಯುವಕನೋರ್ವ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ.
ಬಾಗೇಪಲ್ಲಿ ತಾಲೂಕಿನ ಪುಟ್ಟಪರ್ತಿ ನಿವಾಸಿಯಾಗಿದ್ದ ಮಮತಾ(23) ಎಂಬಾಕೆ ಬೆಂಗಳೂರಿನ B.M.S ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಮೂರು ವರ್ಷಗಳ ಹಿಂದೆ ಮಮತಾಳ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ತಾಯಿ ಒಂದು ವರ್ಷದ ಹಿಂದೆ ಮೃತಪಟ್ಟಿದ್ದಾರೆ. ಇದರಿಂದ ಮಮತಾಳ ಅಣ್ಣ ಮಾನಸಿಕ ಅಸ್ವಸ್ಥನಂತಾಗಿ ಹಾಸಿಗೆ ಹಿಡಿದುಬಿಟ್ಟ. ಇದರಿಂದ ನೊಂದ ಆಕೆ ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಳು.