ಕರ್ನಾಟಕ

karnataka

ETV Bharat / state

ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ವ್ಯಕ್ತಿಯ ಬಳಿ ಡ್ರ್ಯಾಗರ್: ಪೊಲೀಸ್ ಸಿಬ್ಬಂದಿಗೆ ತಗುಲಿಸಿ ಸಿಕ್ಕಿಬಿದ್ದ - ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಕಾರ್ಯಕ್ರಮ

ಸಚಿವ ಡಾ.ಕೆ.ಸುಧಾಕರ್ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ವ್ಯಕ್ತಿಯೊಬ್ಬ ಡ್ರ್ಯಾಗರ್​ ತಂದಿರುವುದು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿದ್ದ ವ್ಯಕ್ತಿಯ ಬಳಿ ಡ್ರ್ಯಾಗರ್
ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿದ್ದ ವ್ಯಕ್ತಿಯ ಬಳಿ ಡ್ರ್ಯಾಗರ್

By

Published : Jul 29, 2022, 8:35 PM IST

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಡ್ರ್ಯಾಗರ್ ಚಾಕು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯನ್ನು ಗಂಗರಾಜು ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಇಂದು ಆಯೋಜಿಸಿದ್ದ ಉಜ್ವಲ ಭಾರತ ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದಾಗ ಸಾರ್ವಜನಿಕರ ಜೊತೆ ಸಚಿವರು ಮಾತನಾಡುತ್ತಿದ್ದರು. ಈ ವೇಳೆ ಪೊಲೀಸರು ಜನರನ್ನು ಹಿಂದಕ್ಕೆ ತಳ್ಳುತ್ತಿದ್ದರು. ಇದೇ ವೇಳೆ ಅಲ್ಲೇ ಇದ್ದ ಒಬ್ಬನ ಬಳಿ ಡ್ರ್ಯಾಗರ್ ಇದ್ದು, ತಳ್ಳಾಟದ ವೇಳೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಾಗೂ ಸಾರ್ವಜನಿಕರಿಗೆ ಆ ಡ್ರ್ಯಾಗರ್​ ತಗುಲಿದೆ. ಆ ಬಳಿಕ ಆತ ಡ್ರ್ಯಾಗರ್ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ತಕ್ಷಣ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಂತರ ಸಚಿವ ಸುಧಾಕರ್ ಬೆಂಗಳೂರಿನತ್ತ ಪ್ರಯಾಣ ಬೆಳಸಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆ ವ್ಯಕ್ತಿ ತನ್ನ ಬಳಿ ಡ್ರ್ಯಾಗರ್ ಏಕೆ ಇಟ್ಟುಕೊಂಡಿದ್ದ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

(ಇದನ್ನೂ ಓದಿ: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ: ಯುವಕನ ಬರ್ಬರ ಕೊಲೆ)

For All Latest Updates

ABOUT THE AUTHOR

...view details