ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ವರದಕ್ಷಿಣೆ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರಿಗೆ ಕೊಟ್ಟು ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳು ಕಳೆದ ನಂತರ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಮಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ನಳಿನಿ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.