ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರದಲ್ಲಿ ನೇಣಿಗೆ ಶರಣಾದ ಡಿಇಡಿ ವಿದ್ಯಾರ್ಥಿನಿ - ವಿದ್ಯಾರ್ಥಿನಿ ನೇಣಿಗೆ ಶರಣು ಲೆಟೆಸ್ಟ್ ನ್ಯೂಸ್​

ನಗರದಲ್ಲಿ ಡಿಇಡಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಡಿಇಡಿ ವಿದ್ಯಾರ್ಥಿನಿ ನೇಣಿಗೆ ಶರಣು
A young girl student committed suicide

By

Published : Dec 11, 2019, 5:31 PM IST

ಚಿಕ್ಕಬಳ್ಳಾಪುರ:ಡಿಇಡಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ನರಸಪ್ಪ ಕಟ್ಟಡದಲ್ಲಿ ನಡೆದಿದೆ.

ವಿದ್ಯಾರ್ಥಿನಿ ನೇಣಿಗೆ ಶರಣು

ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದ ಸುನಿಯಾ(23) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ಎರಡು ತಿಂಗಳ ಹಿಂದೆ ನರಸಪ್ಪ ಎಂಬುವವರಲ್ಲಿ ಮನೆ ಬಾಡಿಗೆ ಪಡೆದು ಡಿಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಸಂಬಂಧಿಕರೊಬ್ಬರು ಆಕೆಯನ್ನು ಮಾತನಾಡಿಸಲೆಂದು ರೂಮ್​ಗೆ ಹೋಗಾದ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ ಎಂಬ ಮಾಹಿತಿ ದೊರೆತಿದೆ.

ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಬ್​ಇನ್ಸ್‌ಪೆಕ್ಟರ್‌​ ನಾರಾಯಣಸ್ವಾಮಿ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ರು. ಬಳಿಕ ಯುವತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಜೀವನದಲ್ಲಿ ಜಿಗುಪ್ಸೆ ಕಾರಣವೆನ್ನಲಾಗುತ್ತಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ABOUT THE AUTHOR

...view details