ಕರ್ನಾಟಕ

karnataka

ETV Bharat / state

ಕೆಲಸ ಸಿಗದ ಹಿನ್ನೆಲೆ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ - a young man committed suicide at chikkaballapura

ತನ್ನ ವಿದ್ಯಾಭ್ಯಾಸಕ್ಕೆ ತಕ್ಕಂತೆ ಸೂಕ್ತ ಉದ್ಯೋಗ ಸಿಗಲಿಲ್ಲ ಎಂದು ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

a-young-man-committed-suicide-at-chikkaballapura
ಕೆಲಸ ಸಿಗದ ಹಿನ್ನಲೆ ಮನನೊಂದ ಯುವಕ ನೇಣುಬಿಗಿದು ಆತ್ಮಹತ್ಯೆ

By

Published : Aug 6, 2022, 8:00 AM IST

ಚಿಕ್ಕಬಳ್ಳಾಪುರ: ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ.

ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

ಕಳೆದ ದಿನ ಮನೆಯಿಂದ ಹೊರಟು ಎಲ್ಲಿಗೋ ಹೋಗಿ ಬರುವುದಾಗಿ ಹೇಳಿದ್ದ ಶ್ರೀಕಾಂತ್, ಊರು ಪಕ್ಕದ ಹುಣಸೇ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಕರಣ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಓದಿ :ಬಳ್ಳಾರಿ : ಕಲುಷಿತ ನಲ್ಲಿ ನೀರು ಸೇವಿಸಿ 21 ಮಂದಿ ಅಸ್ವಸ್ಥ

ABOUT THE AUTHOR

...view details