ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಲ್ಲದೇ ಪರದಾಡುವಂತಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಈ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಸೈಯದ್ ಮುಜಮ್ಮಿಲ್ ಹಾಗೂ ಸುಧಾಕರ್ ಅಧಿಕಾರಿಗಳ ವಿರುದ್ದ ದೂರಿದ್ದಾರೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ಗೈರು, ಸಾರ್ವಜನಿಕರ ಪರದಾಟ - ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ
ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಲ್ಲದೇ ಪರದಾಡುವಂತಾಗಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ಗೈರು
ಗ್ರಾಮ ಪಂಚಾಯಿತಿಯ ಕಚೇರಿಗೆ ಪ್ರತಿ ದಿನ ಜನರು ಬಂದು ಅಲೆದಾಡುತ್ತಿದ್ದರೂ, ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಗ್ರಾಮ ಪಂಚಾಯಿತಿಯ ಕೆಲ ಅಧಿಕಾರಿಗಳು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಗ್ರಾಮಪಂಚಾಯತಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.