ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಗ್ರಾಮ ಲೆಕ್ಕಾಧಿಕಾರಿ.. - ಚಿಕ್ಕಬಳ್ಳಾಪುರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ಜಮೀನು ಖಾತೆ ಮಾಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಾಗೇಪಲ್ಲಿ ತಾಲೂಕಿನ ತಿಮ್ಮಂಪಲ್ಲಿ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್ ಬಿದ್ದಿದ್ದಾರೆ.

ACB traps village accountant
ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

By

Published : Dec 21, 2021, 3:36 PM IST

ಬಾಗೇಪಲ್ಲಿ (ಚಿಕ್ಕಬಳ್ಳಾಪುರ):ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ನಡೆಸಿದ ದಾಳಿಗೆ ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಬಾಗೇಪಲ್ಲಿ ತಾಲೂಕಿನ ತಿಮ್ಮಂಪಲ್ಲಿ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್ ಸಿಕ್ಕಿ ಬಿದ್ದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ಜಮೀನು ಖಾತೆ ಮಾಡಲು ವ್ಯಕ್ತಿಯೊಬ್ಬರಿಂದ 35 ಸಾವಿರ ರೂ. ಹಣಕ್ಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ 10 ಸಾವಿರ ರೂ. ಮುಂಗಡ ಪಡೆದುಕೊಂಡಿದ್ದರು. ಪುನಃ ಇಂದು ಮಧ್ಯಾಹ್ನ 1.30 ಗಂಟೆಗೆ ಉಳಿದ 25 ಸಾವಿರ ರೂಗಳನ್ನು ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಪಡೆಯುತ್ತಿರುವಾಗ, ಖಚಿತ ಮಾಹಿತಿ ಆಧಾರಿಸಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಜೂಜಾಡುತ್ತಿದ್ದ ಎಎಸ್ಐ, ಕಾನ್ಸ್‌ಟೇಬಲ್, ತಹಶೀಲ್ದಾರ್​ ಚಾಲಕ ಅರೆಸ್ಟ್​

ಎಸಿಬಿ ಡಿವೈಎಸ್​ಪಿ ಪ್ರವೀಣ್ ಎಂ. ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚ ಪಡೆದಿದ್ದ ಹಣ ಹಾಗೂ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಕುಮಾರ್​ ಅವರನ್ನು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

ABOUT THE AUTHOR

...view details