ಕರ್ನಾಟಕ

karnataka

ETV Bharat / state

ಕೆಎಸ್​ಆರ್​ಟಿಸಿ ಬಸ್-ಬೈಕ್​​​ ನಡುವೆ ಡಿಕ್ಕಿ: ಸವಾರ ಸಾವು - bike accident

ರಾಜ್ಯ ಸಾರಿಗೆ ಬಸ್​ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Accident between KSRTC bus and bike
ಶಿವಕುಮಾರ್ (26) ಮೃತ ಯುವಕ

By

Published : Mar 5, 2020, 8:10 PM IST

ಚಿಕ್ಕಬಳ್ಳಾಪುರ :ಕೆಎಸ್​ಆರ್​ಟಿಸಿ ಬಸ್​ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ದುಡ್ಡು ಕುರುಗೋಡು ಬಳಿ ನಡೆದಿದೆ. ಕಲ್ಲೂಡಿ ಗ್ರಾಮದ ಶಿವಕುಮಾರ್ (26) ಮೃತ ಯುವಕ ಎಂದು ತಿಳಿದು ಬಂದಿದೆ.

ರಾಜ್ಯ ಸಾರಿಗೆ ಬಸ್​

ಹಿಂದೂಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಹಾಗೂ ಕಲ್ಲುಡಿಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ದ್ವಿಚಕ್ರ ವಾಹನ

ABOUT THE AUTHOR

...view details