ಚಿಕ್ಕಬಳ್ಳಾಪುರ: ಮಂಕಿಪಾಕ್ಸ್ ಹಿನ್ನೆಲೆ ರಾಜ್ಯದ ಎಲ್ಲಾ ಗಡಿಗಳಲ್ಲಿ ಬಹಳ ಕಟ್ಟೆಚ್ಚರ ವಹಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದ ವತಿಯಿಂದ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಯಾಣಿಕರು ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗದಿದ್ದರೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ವಿಮಾನ ನಿಲ್ದಾಣ, ಬಂದರುಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ ಎಂದರು. ಜ್ವರ, ಚರ್ಮದ ಮೇಲೆ ಗಾಯಗಳಾದರೆ ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ತಿಳಿಸಿದರು.