ಚಿಕ್ಕಬಳ್ಳಾಪುರ:ವಿಧಾನಸಭೆಯಲ್ಲಿ ಸಾಕಷ್ಟು ಚರ್ಚೆಗಳಿಂದ ಬೇಸತ್ತಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳಕ್ಕೆ ಭೇಟಿ ಕೊಟ್ಟು ತಮ್ಮ ಮದುವೆಯ ದಿನಗಳನ್ನು ಮೆಲುಕು ಹಾಕಿದರು.
ರಾಜಕೀಯ ಏರಿಳಿತಗಳಿಂದ ಇಷ್ಟು ದಿನ ಬಹಳಷ್ಟು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಈಗ ಸ್ವಲ್ಪ ನಿರಾಳನಾಗಿರುವೆ ಎಂದು ತಿಳಿಸಿದರು. ಇದೇ ವೇಳೆ ಕಳೆದ 42 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ನಮ್ಮ ಮದುವೆ ನಡೆಯಿತು. ಆಗ ಇಲ್ಲಿ ಯಾವ ಮೂಲಭೂತ ಸೌಕರ್ಯಗಳು ಇರಲಿಲ್ಲ. ದೇವರಾಜಅರಸ್ ಆಗಿನ ಮುಖ್ಯಮಂತ್ರಿಗಳಾಗಿದ್ದರು ನಾನು ಯುವಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದೆ ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು.