ಕರ್ನಾಟಕ

karnataka

ETV Bharat / state

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ತಾಲೂಕಿನಲ್ಲಿ ಸಕಲ ಸಿದ್ಧತೆ: ಎಸ್.ಎನ್.ಸುಬ್ಬಾರೆಡ್ಡಿ

ಜು. 2ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಲಿರುವ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮ ವೀಕ್ಷಿಸಲು ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

By

Published : Jun 27, 2020, 6:37 PM IST

Meeting
Meeting

ಬಾಗೇಪಲ್ಲಿ:ಜು. 2ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಲಿರುವ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮ ವೀಕ್ಷಿಸಲು ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ನಡೆದ ಬಾಗೇಪಲ್ಲಿ ತಾಲೂಕು ಹಾಗೂ ಗುಡಿಬಂಡೆ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬರುವ ಜು. 2ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಲಿರುವ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಹಾಗಾಗಿ ಕಾರ್ಯಕ್ರಮ ವೀಕ್ಷಿಸಲು ಸಾಮಾಜಿಕ ಜಾಲತಾಣಗಳ ಮುಖಾಂತರ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ ಕಾರಣ ಕೆಪಿಸಿಸಿ ಅಧ್ಯಕ್ಷರಾಗಿ 3 ತಿಂಗಳು ಕಳೆದರೂ ಪದಗ್ರಹಣ ಕಾರ್ಯಕ್ರಮ ನಡೆದಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಹೆಚ್ಚು ಜನ ಸೇರಿಸದೆ ಕಾರ್ಯಕ್ರಮ ನಡೆಸುವುದಕ್ಕೆ ತಮ್ಮ ಅಭ್ಯಂತರವಿಲ್ಲವೆಂದು ಸ್ಪಷ್ಟಪಡಿಸಿರುವ ಹಿನ್ನೆಲೆ 'ಪ್ರತಿಜ್ಞಾ ದಿನ' ಎಂಬ ಹೆಸರಿನಲ್ಲಿ ಜುಲೈ 2ರಂದು ಪದಗ್ರಹಣ ನಡೆಯಲಿದೆ. ಹಾಗಾಗಿ ತಾಲೂಕು ಮಟ್ಟದಲ್ಲಿ ಸಕಲ ವ್ಯವಸ್ಥೆಗಳನ್ನ ಮಾಡಲಾಗಿದೆ ಎಂದು ಹೇಳಿದರು.

ABOUT THE AUTHOR

...view details