ಕರ್ನಾಟಕ

karnataka

ETV Bharat / state

ಎಪಿಎಂಸಿ ಕಾಯ್ದೆ : ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಗೆ ಸಿಪಿಎಂ ಭಾರಿ ವಿರೋಧ - ಸಿಪಿಎಂ ಪಕ್ಷದ ವತಿಯಿಂದ ತಹಶೀಲ್ದಾರ್ ರವರಿಗೆ ಮನವಿ

ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಸಿಪಿಎಂ ವತಿಯಿಂದ ತಹಶೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Amendment of the APMC Act Correction CPM protest
ಚಿಕ್ಕಬಳ್ಳಾಪುರ: ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ, ಸಿಪಿಎಂ ವಿರೋಧ

By

Published : May 20, 2020, 9:05 PM IST

ಗುಡಿಬಂಡೆ: ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಸಿಪಿಎಂ ಪಕ್ಷದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಿಪಿಎಂ ಪಕ್ಷದ ಮುಖಂಡ ಲಕ್ಷ್ಮೀ ನಾರಾಯಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ದೇಶದ ರೈತ- ಬಡವರ್ಗದ ಜನರಿಗೆ ಅನ್ಯಾಯವೆಸಗುತ್ತಿದೆ. ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುತ್ತಿದೆ. ಕೇವಲ ಪ್ರಚಾರಗಳಲ್ಲಿ ಮಾತ್ರ ರೈತರ ಪರ ಸರ್ಕಾರ ಎಂದು ಹೇಳುವುದನ್ನು ಬಿಟ್ಟರೇ ಇಲ್ಲಿಯವರೆಗೆ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ.

ಈ ಹಾದಿಯಲ್ಲಿಯೇ, ಪ್ರಸ್ತುತ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಮತ್ತಷ್ಟು ದ್ರೋಹ ಮಾಡುತ್ತಿದೆ. ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಬಂಡವಾಳ ಶಾಯಿಗಳು ಹಾಗೂ ಬಹು ರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. 6 ರೈತರನ್ನು ಸರ್ವತೋಮುಖವಾಗಿ ಅಭಿವೃದ್ದಿ ಮಾಡುತ್ತೇವೆ ಎಂದು ನಂಬಿಸಿರುವ ಸರ್ಕಾರ ಕೂಡಲೇ ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡುತ್ತಿರುವುದನ್ನು ರಾಜ್ಯಪಾಲರು ತಿರಸ್ಕರಿಸಬೇಕೆಂದು ಆಗ್ರಹಿಸಿದರು.

ABOUT THE AUTHOR

...view details