ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರು ಆಗಮಿಸುತ್ತಿರುವ ಹಿನ್ನೆಲೆ ಮುದ್ದೇನಹಳ್ಳಿ ಗ್ರಾಮದಲ್ಲಿ ಹೈ ಅಲರ್ಟ್ ಮಾಡಲಾಗಿತ್ತು.
ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿ ಪ್ರವೇಶ ನೀಡಲಾಯಿತು. ಡಾಗ್ ಸ್ಕ್ವಾಡ್ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಅಮಿತ್ ಶಾ ಆಗಮನ ಹಿನ್ನೆಲೆ ಚಿಕ್ಕಬಳ್ಳಾಪುರ ನಗರವು ಕೇಸರಿಮಯವಾಗಿತ್ತು.