ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಅಮಿಟಿಗಾನಹಳ್ಳಿಯಲ್ಲಿ ಎಂಟು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಶಾಸಕಜೆ. ಕೆ. ಕೃಷ್ಣಾರೆಡ್ಡಿ ಉದ್ಘಾಟಿಸಿದರು.
ಅಂಗನವಾಡಿ ಕೇಂದ್ರದಲ್ಲಿ ಬರುವ ಮಕ್ಕಳಿಗೆ ಉತ್ತಮ ಆಹಾರ ಮತ್ತು ಪೌಷ್ಟಿಕಾಂಶಗಳನ್ನು ನೀಡಿ ಜಾಗ್ರತೆಯಿಂದ ನೋಡಿಕೊಳ್ಳಬೇಕೆಂದು ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು. ಅಂಗನವಾಡಿ ಕೇಂದ್ರವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ನರೇಗಾ ಯೋಜನೆಯಡಿ ನಿರ್ಮಿಸಲಾಗಿದೆ, ಇದಕ್ಕೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ತಿಳಿಸಿದರು.