ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿ ಕೇಕ್ ಕತ್ತರಿಸಿ ಮಕ್ಕಳನ್ನು ಸ್ವಾಗತಿಸಿದ ಡಿಸಿ - ಕೇಕ್ ಕತ್ತರಿಸಿದ ಜಿಲ್ಲಾಧಿಕಾರಿ ಆರ್. ಲತಾ

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು ಆರಂಭಗೊಳ್ಳುತ್ತಿರುವುದು ಸಂತಸದ ಬೆಳವಣಿಗೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

anganavadi-re-opened-in-chikkaballapura
ಅಂಗನವಾಡಿ ಕೇಂದ್ರದಲ್ಲಿ ಕೇಕ್ ಕತ್ತರಿಸಿ ಮಕ್ಕಳನ್ನು ಸ್ವಾಗತಿಸಿದ ಡಿಸಿ..

By

Published : Nov 8, 2021, 10:12 PM IST

ಚಿಕ್ಕಬಳ್ಳಾಪುರ: ನಗರದ ಹೆಚ್.ಎಸ್.ಗಾರ್ಡನ್‌ನ​ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಮಕ್ಕಳನ್ನು ಕೇಕ್ ಕತ್ತರಿಸುವುದರ ಮೂಲಕ ಜಿಲ್ಲಾಧಿಕಾರಿ ಆರ್.ಲತಾ ಬರಮಾಡಿಕೊಂಡಿದ್ದಾರೆ.

ಇಂದು ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಂಗನವಾಡಿ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿಗಳೇ ಸ್ವತಃ ಕೇಕ್ ಕತ್ತರಿಸಿ ಚಿಣ್ಣರಿಗೆ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ವೇಳೆ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು ಆರಂಭಗೊಳ್ಳುತ್ತಿರುವುದು ಸಂತಸದ ಬೆಳವಣಿಗೆ. ಮಕ್ಕಳ ಸುರಕ್ಷತೆ ಬಹಳ ಮುಖ್ಯ. ಅಂಗನವಾಡಿ ಕೇಂದ್ರಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅವರಿಗೆ ಹೆಚ್ಚಿನ ಕಾಳಜಿ ಹಾಗೂ ಪಾಲನೆಯ ಅವಶ್ಯಕತೆ ಇರುತ್ತದೆ ಎಂದರು.

ಕೋವಿಡ್ ಅಧಿಕವಿದ್ದ ಸಂದರ್ಭದಲ್ಲಿ ಅಂಗನವಾಡಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಬಹಳ ಕಷ್ಟಪಟ್ಟು ಕೆಲಸ ಮಾಡಿದ್ದೀರಿ. ನಿಮಗೆಲ್ಲ ಧನ್ಯವಾದಗಳು. ಮುಂದೆಯೂ ಸಹ ಮಕ್ಕಳಿಗೆ ವೈರಸ್​ ಹರಡದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:ಚನ್ನಪಟ್ಟಣ ನಗರಸಭೆ ಜೆಡಿಎಸ್​ ತೆಕ್ಕೆಗೆ: ಯೋಗೇಶ್ವರ್‌ಗೆ ನಿರಾಸೆ, ಹೆಚ್​ಡಿಕೆ ಮೇಲುಗೈ

ABOUT THE AUTHOR

...view details