ಬೆಂಗಳೂರು/ ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆ
ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೊರೊನಾ ಪಾಸಿಟಿವ್ ಕೇಸ್
ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. 32 ವರ್ಷದ ವ್ಯಕ್ತಿಯೊಬ್ಬರು ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದು ಅವರಲ್ಲಿ ಕೊವಿಡ್ -19 ಸೋಂಕು ಕಂಡುಬಂದಿದೆ.
ಈಗಾಗಲೇ ಸೋಂಕಿತರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಒಟ್ಟಾರೆ ಕರ್ನಾಟಕದಲ್ಲಿ 16 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದು, ಕಲಬುರಗಿಯಲ್ಲಿ ವಯೋವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.