ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಮಹಾರಾಷ್ಟ್ರದ ಕಂಟಕ ಬೆಂಬಿಡದೆ ಕಾಡುತ್ತಿದ್ದು, ಇಂದು ಸಹ ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಚಿಕ್ಕಬಳ್ಳಾಪುರದಲ್ಲಿಂದು ಇಬ್ಬರಿಗೆ ಕೊರೊನಾ: ಸೋಂಕಿತರ ಸಂಖ್ಯೆ 145ಕ್ಕೆ ಏರಿಕೆ - ಚಿಕ್ಕಬಳ್ಳಾಪುರ ಸುದ್ದಿ
ಮಾಹಾರಾಷ್ಟ್ರದಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ವಾಪಸಾದ 10 ವರ್ಷದ ಬಾಲಕಿ ಹಾಗೂ 36 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್..ಸೋಂಕಿತರ ಸಂಖ್ಯೆ 145ಕ್ಕೆ ಏರಿಕೆ
ಮಾಹಾರಾಷ್ಟ್ರದಿಂದ ವಾಪಸಾದ 10 ವರ್ಷದ ಬಾಲಕಿ ಹಾಗೂ 36 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145ಕ್ಕೆ ಏರಿಕೆಯಾಗಿದೆ.
ಸೋಂಕಿತರಿಗೆ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ 52 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, 90 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.