ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವಡ್ಡರಪಾಳ್ಯ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಪೊಲೀಸರು ದಾಳಿ ಮಾಡಿ, 1 ಕೆಜಿ 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ - ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವಡ್ಡರಪಾಳ್ಯ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಪೊಲೀಸರು ದಾಳಿ ಮಾಡಿ, 1 ಕೆಜಿ 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಅರೆಸ್ಟ್
ಪರಗೋಡು ಪಂಚಾಯತಿಯ ಸುತ್ತಮುತ್ತಲ ಹಳ್ಳಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವಡ್ಡರಪಾಳ್ಯ ನಾರಾಯಣಪ್ಪ (60) ಎಂಬಾತನ ಮನೆ ಮೇಲೆ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ವಿಚಾರಣೆ ವೇಳೆ ಪ್ರತಿದಿನ ಆಂಧ್ರ ಪ್ರದೇಶದಿಂದ ಗಾಂಜಾ ತರಿಸಿ, ಪರಗೋಡು ಪಂಚಾಯಿತಿ ಸುತ್ತಮುತ್ತಲಿನ ಹಳ್ಳಿಗಳ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತಪ್ಪು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.