ಚಿಕ್ಕಬಳ್ಳಾಪುರ: ಕೊರೊನಾ ಸರ್ವೆ ಕಾರ್ಯಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಐಮರೆಡ್ಡಿ ಹಳ್ಳಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಸರ್ವೆ ಕಾರ್ಯಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ - Chikkaballapur
ವ್ಯಕ್ತಿಯೊಬ್ಬ ಕೆಲಸದ ಮೇಲೆ ಹೊರ ರಾಜ್ಯಗಳಿಗೆ ಹೋಗಿ ಬಂದಿದ್ದ ಎಂಬ ಮಾಹಿತಿ ಪಡೆದು ಕೊರೊನಾ ಸರ್ವೆ ಕಾರ್ಯಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ.
ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಕಳೆದ ಸಂಜೆ ಅದೇ ಗ್ರಾಮದ ಮುನಿರಾಜು ಎಂಬ ಲಾರಿ ಡ್ರೈವರ್ ಕೆಲಸದ ಮೇಲೆ ಹೊರ ರಾಜ್ಯಗಳಿಗೆ ಹೋಗಿ ಬಂದಿದ್ದ ಎಂದು ಮಾಹಿತಿ ಬಂದ ಕೂಡಲೇ ಆಶಾ ಕಾರ್ಯಕರ್ತೆ ಅವರ ಮನೆ ಬಾಗಿಲಿಗೆ ಹೋಗಿ, ನೀವು ಹೊರ ರಾಜ್ಯಗಳಿಗೆ ಹೋಗಿ ಬಂದಿದ್ದೀರಿ ಆ ಕಾರಣಕ್ಕೆ ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ನಾಗರಾಜ್ ಸಂತೋಷ್, ಸುಶೀಲಮ್ಮ, ಮಂಜುಳಾ, ಲಕ್ಷ್ಮೀದೇವಮ್ಮ ಗುಂಪು ಸೇರಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ್ದಾರೆ.
ಇನ್ನು ಕೂಡಲೇ ಆಶಾ ಕಾರ್ಯಕರ್ತೆಯನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಗ್ರಾಮಾಂತರ ಠಾಣೆಯ ಪೊಲೀಸರು ಆಶಾ ಕಾರ್ಯಕರ್ತೆಯ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.