ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ರೌಡಿ ಶೀಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಲ್ಲಾರಹಳ್ಳಿಯಲ್ಲಿ ನಡೆದಿದೆ. ರೌಡಿಶೀಟರ್ ಉಪ್ಪಾರಹಳ್ಳಿ ರಮೇಶ್ (34) ಹಲ್ಲೆಗೊಳಗಾದ ವ್ಯಕ್ತಿ. ಮುದುಗೆರೆ ನಿವಾಸಿ ವಿಶ್ವ(26) ಹಲ್ಲೆ ನಡೆಸಿದವನಾಗಿದ್ದಾನೆ
ಕ್ಷುಲ್ಲಕ ಕಾರಣಕ್ಕೆ ರೌಡಿ ಶೀಟರ್ ಮೇಲೆ ಮಾರಣಾಂತಿಕ ಹಲ್ಲೆ! - assault on rowdy sheeter for silly reason
ರೌಡಿಶೀಟರ್ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಗಾಯಳು ರಮೇಶನ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಮೇಶ್ ಮೇಲೆ ತುಮಕೂರು ಜಿಲ್ಲೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಕೊಲೆ ಯತ್ನ ಹಾಗೂ ಡಕಾಯಿತಿ ಪ್ರಕರಣದ ದೂರುಗಳಿದ್ದು, ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕೋಟಾಲದಿನ್ನೆ ಬಾರಲ್ಲಿ ಉಪ್ಪಾರಹಳ್ಳಿ ನಿವಾಸಿ ರಾಮರೆಡ್ಡಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಜಾಮೀನು ಪಡೆದು ಬಿಡುಗಡೆಯಾಗಿದ್ದ.
ಮುದುಗೆರೆ ನಿವಾಸಿ ವಿಶ್ವ ಎಂಬ ಹುಡುಗನ ಬಳಿ ಕಳೆದ ಸಂಜೆ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದು, ರೋಸಿ ಹೋದ ವಿಶ್ವ ಮನೆಗೆ ಹೋಗಿ ಮಚ್ಚಿನಿಂದ ರಮೇಶನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮೋಹನ್ ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.