ಕರ್ನಾಟಕ

karnataka

ETV Bharat / state

ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳಾ ಪಿಡಿಓ ಮೇಲೆ ಹಲ್ಲೆ - ಕೊರೊನಾ ವಾರಿಯರ್ ಮೇಲೆ ಹಲ್ಲೆ

ಶೆಟ್ಟಹಳ್ಳಿ ಗ್ರಾಪಂ ಪಿಡಿಓ ಮೇಲೆ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳಾ ಪಿಡಿಓ ಮೇಲೆ ಹಲ್ಲೆ
ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳಾ ಪಿಡಿಓ ಮೇಲೆ ಹಲ್ಲೆ

By

Published : May 4, 2021, 2:04 AM IST

ಚಿಂತಾಮಣಿ (ಚಿಕ್ಕಬಳ್ಳಾಪುರ): ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಪಿಡಿಓ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.


ಶೆಟ್ಟಹಳ್ಳಿ ಗ್ರಾಪಂ ಪಿಡಿಓ ಬಾಗ್ಯಮ್ಮ ಹಲ್ಲೆಗೊಳಗಾದವರು. ಕಚೇರಿ ಕೆಲಸ ಮುಗಿಸಿ ಮಧ್ಯಾಹ್ನ 3 ಗಂಟೆ ನಂತರ ಪತಿಯ ಜೊತೆ ಬೈಕ್​ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪರಿಚಿತರು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಧಿಕಾರಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳಾ ಪಿಡಿಓ ಮೇಲೆ ಹಲ್ಲೆ
ಘಟನೆ ವಿವರ: ಶೆಟ್ಟಹಳ್ಳಿ ಗ್ರಾಪಂ ಕಾರ್ಯಲಯದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭಾಗ್ಯಮ್ಮ ಕರ್ತವ್ಯ ಮುಗಿಸಿ ತನ್ನ ಪತಿಯ ಜೊತೆ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೆಟ್ಟಹಳ್ಳಿಯ ಹೊರವಲಯದಲ್ಲಿ ಅಪರಿಚಿತರು ಬೈಕ್‌ಗೆ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಪಿಡಿಓ, ಅವರ ಪತಿ ಹಾಗೂ ಕಚೇರಿಯ ಸಿಬ್ಬಂದಿಯನ್ನು ಹೊಡೆದು, ಬಳಿಕ ಪರಾರಿಯಾಗಿದ್ದಾರೆ.

ಪಿಡಿಓ ಅವರನ್ನೇ ಗುರಿಯಾಗಿಸಿಕೊಂಡು ಹಲ್ಲೆ ಮಾಡಿದ್ದಾರೆ. ಪಿಡಿಓ ಮಾಂಗಲ್ಯ ಸರ ಕಸಿಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ABOUT THE AUTHOR

...view details