ಕರ್ನಾಟಕ

karnataka

ETV Bharat / state

ವ್ಯಕ್ತಿ ಮೇಲೆ ಮೂವರು ದುಷ್ಕರ್ಮಿಗಳಿಂದ ಲಾಂಗ್​ನಿಂದ ಹಲ್ಲೆ - ಚಿಕ್ಕಬಳ್ಳಾಪುರ ಜಿಲ್ಲೆಯ ಹೆಚ್​ ಕ್ರಾಸ್​ ಬಳಿ ವ್ಯಕ್ತಿ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ ಜಿಲ್ಲೆಯ ಹೆಚ್​ ಕ್ರಾಸ್​ ಬಳಿ ಮುಂಜಾನೆ ಲಾಂಗ್​ನಿಂದ ವ್ಯಕ್ತಿಯೋರ್ವನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

murder
ಕೊಲೆ

By

Published : Jan 30, 2020, 2:00 PM IST

ಚಿಕ್ಕಬಳ್ಳಾಪುರ:ಬೆಳ್ಳಂಬೆಳಗ್ಗೆ ಲಾಂಗ್​ನಿಂದ ವ್ಯಕ್ತಿಯೋರ್ವನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಹೆಚ್‌ ಕ್ರಾಸ್ ಬಳಿ ನಡೆದಿದೆ.

ವ್ಯಕ್ತಿ ಮೇಲೆ ಮಚ್ಚಿನಿಂದ ಹಲ್ಲೆ

ಹೊಸಕೋಟೆ ತಾಲೂಕಿನ ತರುಬಹಳ್ಳಿ ಗ್ರಾಮದ ನಿವಾಸಿ ತ್ಯಾಗರಾಜ್ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ತೀವ್ರ ಗಾಯಗೊಂಡಿರುವ ತ್ಯಾಗರಾಜ್ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಶಿಡ್ಲಘಟ್ಟ ತಾಲೂಕಿನ ಹೆಚ್ ಕ್ರಾಸ್​ನ ಬೆಂಗಳೂರು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇನ್ನು ಹಲ್ಲೆ ಮಾಡಿದ ವ್ಯಕ್ತಿಗಳು ಹೆಚ್‌ ಕ್ರಾಸ್ ನಿವಾಸಿಗಳಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆ ಮೂವರು ವ್ಯಕ್ತಿಗಳು‌ ಕೊಲೆಗೆ ಸಂಚು ರೂಪಿಸಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳಕ್ಕೆ ನಂದಗುಡಿ ಹಾಗೂ ಶಿಡ್ಲಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details