ಚಿಕ್ಕಬಳ್ಳಾಪುರ: ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಜಾನನ ಸರ್ಕಲ್ ಬಳಿ ಅಪರಿಚಿತರ ಗುಂಪೊಂದು ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ಲಾಂಗ್ ಮಚ್ಚಿನಿಂದ ದಾಳಿ ನಡೆಸಿ ಗಂಭೀರ ಗಾಯಗೊಳಿಸಿ ಪರಾರಿಯಾಗಿದ್ದರು. ಸದ್ಯ ಅಗ್ರಹಾರ ಮುರಳಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜೆಡಿಎಸ್ ಮುಖಂಡ ಮುರಳಿ ಅವರನ್ನು ಕೊಲೆಗೆ ಯತ್ನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ ಮೂಲಕ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆಯೂ ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ಶುರು ಮಾಡಿದೆ ಎಂದು ಹೇಳಿದರು.
ಆರೋಪಿಗಳ ಸುಳಿವು ಸಿಕ್ಕಿದೆ:ಕೊಲೆ ಯತ್ನ ನಡೆಸಿದ ಆರೋಪಿಗಳ ಬಗ್ಗೆ ಸುಳಿವು ಇದೆ. ಏಕಾಎಕಿ ಮಾರಕಾಸ್ತ್ರಗಳಿಂದ ಮೂವರು ಅಪರಿಚಿತರು ದಾಳಿ ನಡೆಸಿದ ಪರಿಣಾಮ ಜೆಡಿಎಸ್ ಮಖಂಡ ಅಗ್ರಹಾರ ಮುರಳಿ ತಲೆಗೆ ಕೈಗಳಿಗೆ ಗಂಭೀರ ಗಾಯಗಳಾಗಿವೆ. ಈ ವೇಳೆ ಸ್ಥಳೀಯರು ಅಗ್ರಹಾರ ಮುರಳಿ ಅವರನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಆ ಸಂದರ್ಭದಲ್ಲಿ ಸ್ಥಳೀಯರು ಜೆಡಿಎಸ್ ಮುಖಂಡ ಮುರಳಿ ಅವರಿಗೆ ಚಿಕಿತ್ಸೆ ಕೊಡಿಸುವಲ್ಲಿ ಸ್ಥಳೀಯರು ತೋರಿದ ಶ್ರಮ ಮೆಚ್ಚುವಂತಹದ್ದು ಎಂದು ಮಾಹಿತಿ ನೀಡಿದರು.
ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು ಮಾಹಿತಿ ಕಲೆ ಹಾಕಲಾಗಿದೆ. ಇದುವರೆಗೆ ಯಾರು ಈ ಘಟನೆಗೆ ಸಂಬಂಧಿಸಿದಂತೆ ಯಾರು ಇಲ್ಲಿಯವರೆಗೆ ದೂರು ನೀಡಿಲ್ಲಾ. ಆದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದೇವೆ ಎಂದು ಹೇಳಿದರು.