ಬಾಗೇಪಲ್ಲಿ :ಮುಂದಿನ ವಿಧಾನಸಭೆ ಚುನಾವಣೆ ತನಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraja Bommai) ಬದಲಾವಣೆ ಇಲ್ಲ. ಸಿಎಂ ಬದಲಾವಣೆ (cm change issue) ಎನ್ನುವುದು ಕಾಂಗ್ರೆಸ್ ಪಕ್ಷ ಹುಟ್ಟು ಹಾಕಿದ ರಾಜಕೀಯ ಕುತಂತ್ರ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (State BJP Vice-President B. Y Vijayendra) ಹೇಳಿದರು.
ಬಾಗೇಪಲ್ಲಿ ತಾಲೂಕಿನ ಗೂಳೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. 'ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ. ಅನಂತರ ಸತ್ಯಾಸತ್ಯತೆ ಹೊರ ಬರಲಿದೆ.
ಆದರೆ, ಕಾಂಗ್ರೆಸ್ ಪಕ್ಷದವರು ವಿನಾ ಕಾರಣ ಈ ಹಗರಣದಲ್ಲಿ ಸಿಎಂ ಬೊಮ್ಮಾಯಿ ಅವರ ಹೆಸರನ್ನು ಬಳಸುತ್ತಿದ್ದಾರೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ' ಎಂದರು. 'ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಹೀಗೆ ಆರೋಪಗಳನ್ನು ಮಾಡುತ್ತಾ ರಾಜ್ಯದ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ.