ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದ ವ್ಯಕ್ತಿಯೋರ್ವನಿಗೆ ಶಂಕಿತ ಕೊರೊನಾ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನೆಲೆ, ಪಟ್ಟಣ ಪಂಚಾಯತ್ ಅಧಿಕಾರಿಗಳು ಅಂಗಡಿಗಳಿಗೆ ಭೇಟಿ ನೀಡಿ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಗುಡಿಬಂಡೆ ಆಸ್ಪತ್ರೆಗೆ ದಾಖಲಾದ ಕೊರೊನಾ ಶಂಕಿತ: ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಅಧಿಕಾರಿಗಳು - Gudibande town in Chikkaballapur district
ಗುಡಿಬಂಡೆ ಪಟ್ಟಣದ ವ್ಯಕ್ತಿಯೋರ್ವನಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಕಂಡುಬಂದಿವೆ. ಈ ರೋಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಹಿನ್ನೆಲೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅಂಗಡಿಗಳಿಗೆ ಭೇಟಿ ನೀಡಿ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಗುಡಿಬಂಡೆ ಪಟ್ಟಣದಲ್ಲಿ ಹಲವು ಬಾರಿ ಸ್ವಚ್ಛತೆ ಇಲ್ಲವೆಂದು ಸುದ್ದಿ ಮಾಡಿದ್ರೂ, ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ, ಕೊರೊನಾ ಶಂಕಿತ ವ್ಯಕ್ತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಕ್ಕೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸತ್ಯನಾರಾಯಣ, ಮುಖ್ಯ ಬೀದಿಗಳ ಮನೆಗಳಿಗೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ, ಕೊರೊನಾ ಬಗ್ಗೆ ಯಾರು ಭಯ ಪಡಬೇಕಿಲ್ಲ. ಮನೆ ಹತ್ತಿರ ನೀವು ಸ್ವಚ್ಛ ಮಾಡಿಕೊಳ್ಳಬೇಕು ಹಾಗೂ ಅಂಗಡಿ ಮಾಲೀಕರು ನಿಮ್ಮ ಅಂಗಡಿಗೆ ಬರುವ ಗ್ರಾಹಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಿ ಸ್ವಚ್ಛತೆ ಕಾಪಾಡಿಕೊಳ್ಳಿಕೊಳ್ಳುವಂತೆ ಸೂಚಿಸಿದ್ರು.