ಕರ್ನಾಟಕ

karnataka

ETV Bharat / state

ಕಬಡ್ಡಿ ಪಂದ್ಯಾವಳಿ: ರಾಜ್ಯಮಟ್ಟಕ್ಕೆ ಬೆಂ.ಗ್ರಾಮಾಂತರ ಕೋಲಾರ ತಂಡಗಳ ಆಯ್ಕೆ - ಬೆಂಗಳೂರು ದಕ್ಷಿಣ ತಂಡ ಜಯಗಳಿಸಿ ರಾಜ್ಯ ಮಟ್ಟಕ್ಕೆ

ಬೆಂಗಳೂರು ವಿಭಾಗ ಮಟ್ಟದ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ವಿಭಾಗದ ಬಾಲಕರ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಬಾಲಕಿಯರ ವಿಭಾಗದಲ್ಲಿ ಕೋಲಾರ ಜಿಲ್ಲೆಯ ಕ್ರೀಡಾಪಟುಗಳು ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಬಡ್ಡಿ ಪಂದ್ಯಾವಳಿ

By

Published : Oct 17, 2019, 11:31 PM IST

ಗುಡಿಬಂಡೆ: 2019-20ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ವಿಭಾಗದ ಬಾಲಕರ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಬಾಲಕಿಯರ ವಿಭಾಗದಲ್ಲಿ ಕೋಲಾರ ಜಿಲ್ಲೆಯ ಕ್ರೀಡಾಪಟುಗಳು ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅ 15 ಮತ್ತು 16 ರಂದು ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ, ಪ್ರೌಢಶಾಲೆಯ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ನಡುವೆ ನಡೆದ ಫೈನಲ್ ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ ಕೋಲಾರ ಮತ್ತು ತುಮಕೂರು ಜಿಲ್ಲೆಗಳ ನಡುವೆ ನಡೆದ ಪಂದ್ಯದಲ್ಲಿ ಕೋಲಾರ ಜಿಲ್ಲೆಯ ಕ್ರೀಡಾಪಟುಗಳು ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ನಡುವೆ ನಡೆದ ಫೈನಲ್​ನಲ್ಲಿ ಬೆಂಗಳೂರು ದಕ್ಷಿಣ ತಂಡ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ತಂಡಗಳ ನಡುವೆ ನಡೆದ ಫೈನಲ್​ನಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ

ABOUT THE AUTHOR

...view details