ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಅಕ್ರಮವಾಗಿ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಾರ್ ಮಾಲೀಕನನ್ನು ಬಂಧಿಸಿದ ಘಟನೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
ಅಕ್ರಮ ಮದ್ಯ ಮಾರಾಟ ಆರೋಪ, ಬಾರ್ ಮೇಲೆ ಪೊಲೀಸರ ದಾಳಿ ಇಲ್ಲಿನ ಸಂತೆ ಬೀದಿ ರಸ್ತೆಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ನಾರಾಯಣಸ್ವಾಮಿ ಅವರ ಮಗ ಮನೋಜ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಾರ್ನ ಹಿಂಬಾಗಿಲು ತೆಗೆದು ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಾಗೇಪಲ್ಲಿ ಪೊಲೀಸ್ ಠಾಣೆ ಸಿಬ್ಬಂದಿ ನಯಾಜ್ ಬೇಗ್, ಸುನೀಲ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.