ಚಿಕ್ಕಬಳ್ಳಾಪುರ: ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಿಗಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಸಾವು - ಲಾರಿ ಮತ್ತು ಬೈಕ್ ಡಿಕ್ಕಿ
ಚಿಕ್ಕಬಳ್ಳಾಪುರ ಜಿಲ್ಲೆಯ ಹುಣಿಗಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಇಬ್ಬರ ಸಾವು
ಮೃತರನ್ನು ಗಂಗರೆಕಾಲುವೆ ನಿವಾಸಿಗಳೆಂದು ಗುರುತಿಸಲಾಗಿದೆ. ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಇನ್ನು ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.