ಚಿಕ್ಕಬಳ್ಳಾಪುರ: ಇಲ್ಲಿಯವರೆಗೆ ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಲಕ್ಷಾಂತರ ಹಕ್ಕಿ, ಕೋಳಿಗಳು ಸಾವನ್ನಪ್ಪಿವೆ. ಇದೀಗ ಈ ಭೀತಿ ಚಿಕ್ಕಬಳ್ಳಾಪುರ ಜಿಲ್ಲೆಗೂ ಎದುರಾಗಿದೆ.
ನಗರದ ಹೊರವಲಯದ ಜಿಲ್ಲಾಡಳಿತ ಭವನದ ಎದುರಿರುವ ಅಮಾನಿ ಗೋಪಾಲಕೃಷ್ಣ ಕೆರೆಯಂಗಳದಲ್ಲಿ ಪಕ್ಷಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವ ದೃಶ್ಯ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಕ್ಷಿಗಳು ದೇಶ-ವಿದೇಶಗಳಿಂದ ಕೆರೆಯಂಗಳಕ್ಕೆ ವಲಸೆ ಬಂದಿದ್ದು, ಇವುಗಳಲ್ಲಿ ಸಾಕಷ್ಟು ಪಕ್ಷಿಗಳು ಅಲ್ಲಲ್ಲಿ ಸಾವನ್ನಪ್ಪಿವೆ. ಹಲವು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿವೆ.