ಚಿಕ್ಕಬಳ್ಳಾಪುರ :ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೇ ನೇರ ಕಾರಣ. ಗಲಭೆಗೆ ಕಾರಣವಾದ ಎರಡೂ ದೊಡ್ಡ ದೊಡ್ಡ ಪಕ್ಷಗಳು. ಜನರು ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಕೋಮು ಗಲಭೆಗೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದು, ರಾಜ್ಯದಲ್ಲಿ ಕೋಮುಗಲಭೆ ಆಗುತ್ತಿದ್ರೂ ಕೇಂದ್ರ ಸರ್ಕಾರ ಏನು ಮಾಡುತ್ತಿದೆ?. ಈ ವಿಚಾರಗಳನ್ನು ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ. ಗಲಭೆಗೆ ಕಾರಣ ಯಾರು ಎಂಬುದು ತನಿಖೆ ನಡೆದು ಅವರ ಮೇಲೆನ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಯಾಕೆ ಮುಗ್ದರಾಗಿ ನೋಡಿತ್ತಿದೆ ಎಂದು ಪ್ರಶ್ನಿಸಿದರು.