ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಕೇಂದ್ರದ ಅನುದಾನ ನೇರವಾಗಿ ಗ್ರಾಮ ಪಂಚಾಯತ್‌ಗಳಿಗೆ ತಲುಪುವುದರಿಂದ ಗ್ರಾಮಗಳ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಗ್ರಾಪಂ ಚುನಾವಣೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ತೆಗೆದುಕೊಂಡಿದ್ದಾರೆಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಎಸ್‌ಎಲ್‌ಎನ್ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 36 ಜಿಲ್ಲೆಗಳಲ್ಲಿ ಆರು ತಂಡಗಳು ಪ್ರವಾಸ ಕೈಗೊಂಡಿವೆ.
ಶೇ.80ರಷ್ಟು ಕಾರ್ಯಕರ್ತರನ್ನು ಗ್ರಾಪಂ ಚುನಾವಣೆಯಲ್ಲಿ ಗೆಲ್ಲಿಸಿ ಪಕ್ಷವನ್ನು ಗಟ್ಟಿಗೊಳಿಸಬೇಕೆಂಬುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ಕನಸಾಗಿದೆ. ಹಳ್ಳಿಯಿಂದ ದಿಲ್ಲಿಯವರೆಗೂ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗ್ರಾಮ ಸ್ವರಾಜ್ಯ ಸಮಾವೇಶದ ಉದ್ದೇಶ ಎಂದರು.