ಚಿಕ್ಕಬಳ್ಳಾಪುರ:ಜಿಲ್ಲಾಡಳಿತ ಕಚೇರಿಗೆ ಕಾರ್ಯ ನಿಮಿತ್ತ ಬಂದ ವ್ಯಕ್ತಿಯ ಶವ ರೈಲ್ವೆ ಹಳಿಯ ಬಳಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆ - suspiciously near a railway track
ನಿನ್ನೆ ಬೆಳಿಗ್ಗೆ ಜಿಲ್ಲಾಡಳಿತ ಭವನಕ್ಕೆ ಕಾರ್ಯ ನಿಮಿತ್ತ ಆಗಮಿಸಿದ್ದ ಈ ವ್ಯಕ್ತಿ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕಾಟ ನಡೆಸಿದ್ದರು.
ಶಿಡ್ಲಘಟ್ಟ ಗಾಂಧಿನಗರದ ನಿವಾಸಿ ಬರ್ಕತ್(30) ಮೃತ ವ್ಯಕ್ತಿ. ಈತ ನಿನ್ನೆ ಬೆಳಿಗ್ಗೆ ಜಿಲ್ಲಾಡಳಿತ ಭವನಕ್ಕೆ ಕೆಲಸದ ನಿಮಿತ್ತ ಆಗಮಿಸಿದ್ದ. ಆದರೆ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕಾಟ ನಡೆಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರಿನ ರೈಲ್ವೆ ಹಳಿ ಬಳಿ ಈತ ಶವ ಪತ್ತೆಯಾಗಿದೆ.
ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ, ನೀರಿನ ಪಾಕೆಟ್ಗಳು ಪತ್ತೆಯಾಗಿದೆ. ಬರ್ಕತ್ನ ತಲೆ ಹಾಗೂ ಕಾಲಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.