ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಗಂಟ್ಲಮಲ್ಲಮ್ಮ ಕಣಿವೆ ತಿರುವಿನಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಅಪಘಾತ: ಸ್ಥಳದಲ್ಲೇ ಯುವಕ ಸಾವು - bike accident
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಬೈಕ್ ಅಪಘಾತವಾಗಿದ್ದು, ಆಂಧ್ರ ಪ್ರದೇಶ ಮೂಲದ ಶರತ್ (18) ಎಂಬ ಯುವಕ ಮೃತಪಟ್ಟಿದ್ದಾನೆ. ಪಾತಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಅಪಘಾತಕ್ಕೆ ಯುವಕ ಬಲಿ
ಆಂಧ್ರ ಪ್ರದೇಶದ ರಿಯಲ್ಪಾಡು ತಾಲೂಕಿನ ಗೊಂದಿಪಲ್ಲಿ ಗ್ರಾಮದ ಯುವಕ ಉದಯ್ (18) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಬಾಗೇಪಲ್ಲಿಯಿಂದ ರಾಯಲ್ಪಾಡಿನ ಗೊಂದಿಪಲ್ಲಿ ಗ್ರಾಮಕ್ಕೆ ತೆರಳುವಾಗ ಅಪಘಾತ ನಡೆದಿದೆ.
ಪಾತಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.