ಚಿಕ್ಕಬಳ್ಳಾಪುರ:ಮನೆಯ ಮುಂದೆ ಕಮಲದ ರಂಗೋಲಿ ಹಾಕಿದರೆ 500 ರೂ. ಕುಕ್ಕರ್, ಮಿಕ್ಸಿಗಳನ್ನು ಬಿಜೆಪಿ ಅಭ್ಯರ್ಥಿ ಸುಧಾಕರ್ ಮತದಾರರಿಗೆ ನೀಡಿ, ವಾಮಮಾರ್ಗದಿಂದ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಎಸ್ಪಿ ಪಕ್ಷದ ಅಭ್ಯರ್ಥಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿ ಪಕ್ಷದ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ನಾನು ಉಪ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತೇನೆ. ಕೃಷ್ಣಾ ನದಿ ನೀರನ್ನು ಬಾಗೇಪಲ್ಲಿಯಿಂದ ಜಿಲ್ಲೆಗೆ ತರಲಾಗುವುದು. ಯುವ ಜನತೆಗೆ ಉದ್ಯೋಗ ಸೃಷ್ಟಿ ಮಾಡಿ, ನೂತನ ಕ್ಷೇತ್ರವನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದರು.