ಚಿಕ್ಕಬಳ್ಳಾಪುರ:ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರಿನ ರಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಖಾಸಗೀ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ : ಮೂವರ ದುರ್ಮರಣ - three
ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂರು ಜನ ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ರಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ತಿಪ್ಪಗೊಂಡನಹಳ್ಳಿಯ ವಿನಯ್ ಬಿನ್ ತ್ಯಾಗರಾಜು (25),ವಿನೋದ್ಬಿನ್ ಶ್ರೀನಿವಾಸ (23) ಹಾಗೂ ಹೊಸಕೆರೆ ಗ್ರಾಮದ ಸುನಿಲ್ ಬಿನ್ ತಮ್ಮಣ್ಣ(25) ಮೃತ ದುರ್ದೈವಿಗಳು.ಇನ್ನುಅಪಘಾತಕ್ಕೆ ಅವಸರವೇ ಮೂಲ ಕಾರಣ ಎಂದು ತಿಳಿದು ಬಂದಿದೆ. ಇನ್ನುಘಟನಾ ಸ್ಥಳಕ್ಕೆ ಡಿವೈಎಸ್ಪಿ ಗೌತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.