ಕರ್ನಾಟಕ

karnataka

ETV Bharat / state

ಉಪ ಕದನ.. ನಾಮಪತ್ರ ಸಲ್ಲಿಸಿದ ಮೂರು ಪಕ್ಷದ ಅಭ್ಯರ್ಥಿಗಳು..

ಉಪಚುನಾವಣೆ ಘೋಷಣೆ ಮಾಡುತ್ತಿದ್ದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಾಡಾಗುತ್ತಿದೆ. ಇಂದು ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Chikkaballapur By-election, ವಿಧಾನಸಭಾ ಉಪಚುನಾವಣೆ

By

Published : Nov 18, 2019, 5:17 PM IST

ಚಿಕ್ಕಬಳ್ಳಾಪುರ :ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ನಾಮಪತ್ರ ಸಲ್ಲಿಸಿದ ಮೂರು ಪಕ್ಷದ ಅಭ್ಯರ್ಥಿಗಳು..

ಉಪಚುನಾವಣೆ ಘೋಷಣೆ ಮಾಡುತ್ತಿದ್ದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಾಡಾಗುತ್ತಿದೆ. ಇಂದು ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಗರದಲ್ಲಿ 6ಡಿಎಆರ್,3ಕೆಎಸ್​ಆರ್​ಪಿ, 350ಪೊಲೀಸರು, 3ಡಿವೈಎಸ್ಪಿ, 9 ಸರ್ಕಲ್ ಇನ್ಸ್‌ಪೆಕ್ಟರ್, 21 ಸಬ್​ಇನ್ಸ್‌ಪೆಕ್ಟರ್​ಗಳನ್ನು ನಿಯೋಜನೆ ಗೊಳಿಸಲಾಗಿತ್ತು. ಚುನಾವಣಾ ಅಧಿಕಾರಿಗಳ ಕಚೇರಿ ಸುತ್ತಮುತ್ತಲು 200 ಮೀಟರ್ ನಿರ್ಬಂಧ ಹೇರಲಾಗಿದೆ.

ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಸ್ಟಾರ್ ಕ್ಯಾಂಪೇನರಾಗಿ ಕಾಂಗ್ರೆಸ್ ಪಕ್ಷದಿಂದ ಡಿಕೆ ಶಿವಕುಮಾರ್, ಕೃಷ್ಣಾಬೈರೇಗೌಡ ಸಾಥ್ ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಯ ಪರ ಸಿಟಿ ರವಿ, ಅಶ್ವತ್ಥ್ ನಾರಾಯಣ, ವೈ ಎ ನಾರಾಯಣಸ್ವಾಮಿ ಸಾಥ್ ನೀಡುತ್ತಿದ್ದಾರೆ. ಇನ್ನು, ಜೆಡಿಎಸ್ ಅಭ್ಯರ್ಥಿಯ ಪರ ಕುಮಾರಸ್ವಾಮಿ ಸಾಥ್ ನೀಡುತ್ತಿದ್ದಾರೆ.

ABOUT THE AUTHOR

...view details