ಚಿಕ್ಕಬಳ್ಳಾಪುರ:ಮೊಸರು ತರಲು ಬೈಕ್ನಲ್ಲಿ ಹೋದ ಯುವಕನೋರ್ವ ಕ್ಯಾಂಟರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಸಂಭವಿಸಿದೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕ್ಯಾಂಟರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಬೈಕ್ ಸವಾರ ಸಾವು: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಂಬೇಡ್ಕರ್ ವೃತ್ತದ ನಿವಾಸಿ ಸಾಗರ್ (25) ಮೃತ ಯುವಕ. ಇಂದು ಮಧ್ಯಾಹ್ನ ಸಾಗರ್ ಮನೆಯಿಂದ ಮೊಸರು ತರಲು ನಗರಕ್ಕೆ ಬಂದ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ವಾಹನವನ್ನು ಗಮನಿಸದೆ ಏಕಾಏಕಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ.
ಈ ಘಟನೆಯಿಂದ ಕೆಲ ಹೊತ್ತು ಬೆಂಗಳೂರು-ಹಿಂದೂಪುರ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳಕ್ಕೆ ಸಿಪಿಐ ಶಶಿಧರ್, ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತ ದೇಹವನ್ನು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಸದ್ಯ ಕ್ಯಾಂಟರ್ ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಗೌರಿಬಿದನೂರು ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.